ಚಿಕ್ಕಮಗಳೂರು : ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ನಡೆಯುತ್ತಿರುವ ಸಂಕೀರ್ತನಾ ಯಾತ್ರೆಯಲ್ಲಿ ನೂರಾರು ಮಹಿಳೆಯರು ಪಾಲ್ಗೊಂಡಿದ್ದು, ಬೋಳರಾಮೇಶ್ವರ ದೇವಾಲಯದಿಂದ ಸಂಕೀರ್ತನಾ ಯಾತ್ರೆ ಆರಂಭಗೊಂಡಿದ್ದು, ಮೆರವಣಿಗೆ ಬಳಿಕ ದತ್ತಪೀಠಕ್ಕೆ ಸಾವಿರಾರು ಮಹಿಳೆಯರು ತೆರಳಲಿದ್ದು, ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ. ಜಿಲ್ಲೆಯ ಮಹಿಳೆಯರು ಸೇರಿದಂತೆ ಹೊರ ಜಿಲ್ಲೆಗಳಿಂದ ಮಹಿಳೆಯರು ಆಗಮಿಸಿದ್ದು, ಮಹಿಳೆಯರು ದತ್ತಪೀಠದಲ್ಲಿ ಹೋಮ,ಗಣಹೋಮವನ್ನು ಅನುಸೂಯ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಸೂಕ್ಷ್ಮ ,ಅತಿಸೂಕ್ಷ್ಮ ಪ್ರದೇಶದಲ್ಲಿ ಪೊಲೀಸ್ ಹೈ ಅಲರ್ಟ್ ಘೋಷಿಸಲಾಗಿದ್ದು, ಇನಾಂ ದತ್ತಾತ್ರೇಯ ಪೀಠದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಭದ್ರತೆಗಾಗಿ ಜಿಲ್ಲೆಯಾದ್ಯಂತ 3500 ಪೊಲೀಸರ ನಿಯೋಜನೆ ಮಾಡಲಾಗಿದ್ದು, ಸಂಕೀರ್ತನಾ ಯಾತ್ರೆಯಲ್ಲಿ ಶಾಸಕ ಸಿ.ಟಿ.ರವಿ, ದೀಪಕ್ ದೊಡ್ಡಯ್ಯ, ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.









