ಚಿಕ್ಕಮಗಳೂರು: ವಿದ್ಯುತ್ ಶಾಕ್ ನಿಂದ ಇಬ್ಬರ ದುರ್ಮರಣ…

309
firstsuddi

ಚಿಕ್ಕಮಗಳೂರು : ವಿದ್ಯುತ್ ಶಾಕ್ ನಿಂದ ಇಬ್ಬರು ಮೃತಪಟ್ಟಿದ್ದು, ಓರ್ವನ  ಸ್ಥಿತಿ ಗಂಭೀರವಾಗಿರುವ ಘಟನೆ  ಹರಿಹರದಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್ (35),  ಭರತ್ ಕುಮಾರ್ (20) ಮೃತ ದುರ್ದೈವಿಗಳು. ಶಿವಕುಮಾರ್ ಅವರು ನಿರ್ಮಾಣ ಹಂತದ ಮನೆಯಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ, ಭರತ್ ಕಾಫಿ ಕ್ಯೂರಿಂಗ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಗಂಭೀರವಾಗಿ  ಗಾಯಗೊಂಡ ಸಚಿನ್ ಎಂಬುವವರನ್ನು ಬೆಂಗಳೂರಿನ ಆಸ್ಪತ್ರೆಗೆ  ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ  ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮಾಂತರ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.