ಚಿಂತಾಮಣಿ ಪ್ರಸಾದ ಪ್ರಕರಣ:ಮುನ್ನೆಚ್ಚರಿಕೆಗಳ ಕುರಿತು ಸರ್ಕಾರ ಕೆಲವು ಮಾರ್ಗಸೂಚಿ ಹೊರಡಿಸುವ ಅಗತ್ಯವಿದೆ:ಸಿಎಂ ಕುಮಾರಸ್ವಾಮಿ

192
firstsuddi

ಚಿಕ್ಕಬಳ್ಳಾಪುರ : ಚಿಂತಾಮಣಿಯ ದೇವಾಲಯದಲ್ಲಿ ಪ್ರಸಾದ ಸ್ವೀಕರಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಮಾಹಿತಿ ಪಡೆದಿದ್ದು, ಮರಣೋತ್ತರ ಪರೀಕ್ಷೆಯ ವರದಿ ನಿರೀಕ್ಷಿಸಲಾಗುತ್ತಿದ್ದು, ಪದೇ ಪದೇ ಇಂತಹ ದುರಂತಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸರ್ಕಾರ ಕೆಲವು ಮಾರ್ಗಸೂಚಿ ಹೊರಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಟ್ವಿಟ್ ಮೂಲಕ ತಿಳಿಸಿದ್ದಾರೆ.