ಚಿತ್ರದುರ್ಗ: ನಿಂತಿದ್ದ ಲಾರಿಗೆ ಕ್ವಾಲಿಸ್ ಕಾರ್ ಡಿಕ್ಕಿ ಸ್ಥಳದಲ್ಲೇ ನಾಲ್ವರ ಸಾವು…

471
firstsuddi

ಚಿತ್ರದುರ್ಗ-  ಗೋವಾದಿಂದ ತಮಿಳುನಾಡಿಗೆ ತೆರಳುತ್ತಿದ್ದ ಕ್ವಾಲಿಸ್ ಕಾರು ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಸಮೀಪ ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಇದ್ದ ಸದ್ದಂ ಹುಸೇನ್ (22), ಸದ್ದಂ (21), ತೌಸಿಫ್ಅಹಮ್ಮದ್(20),ಶಾರೂಕ್ (21), ಸ್ಥಳದಲ್ಲೆ ಮೃತಪಟ್ಟಿದ್ದು,  ಅಸಿಫ್(21) ಚಿಕಿತ್ಸೆ ಫಲಕಾರಿಯಾಗದೇ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು,  ಒಬ್ಬರ ಸ್ಥಿತಿ ಗಂಭೀರ ಎಂದು ತಿಳಿದುಬಂದಿದ್ದು, ಈ ಬಗ್ಗೆ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.