ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 20 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್…

156
firstsuddi

ನವದೆಹಲಿ : ಸಿಎಎ ವಿರೋಧಿಸಿ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಲಾ 20 ಲಕ್ಷ ರೂ ಪರಿಹಾರ ಘೊಷಣೆ ಮಾಡಿದ್ದಾರೆ. ಅಲ್ಲದೇ ಹಿಂಸಾಚಾರದಲ್ಲಿ ಗಾಯಗೊಂಡವರು ಕೇಂದ್ರ ಸರ್ಕಾರದ “ಪರಿಶ್ತೆ” ಯೋಜನೆಯಡಿ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದ್ದಾರೆ.