ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರು ಆತ್ಮಹತ್ಯೆಗೆ ಯತ್ನ…

171
firstsuddi

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಸಂಜೆ 7:30ರ ಸುಮಾರಿಗೆ ತಮ್ಮ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಸಂತೋಷ್ ಅವರ ಪತ್ನಿ ಜಾಹ್ನವಿ ಅವರು ಮಲಗಿದ್ದ ಸಂತೋಷ್ ಅವರನ್ನು ಎಬ್ಬಿಸಲು ಪ್ರಯತ್ನಿಸಿದಾಗ ನಿದ್ದೆ ಮಾತ್ರೆ ಸೇವಿಸಿರುವುದು ಬೆಳಕಿಗೆ ಬಂದಿದ್ದು, ಕೂಡಲೇ ಅವರನ್ನು ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ. ಸಂತೋಷ್ ಅವರು ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದ್ದು, ಈ ಕುರಿತು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.