ಬೆಂಗಳೂರು ; ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಲ್ವರು ನೂತನ ಸಚಿವರ ಖಾತೆಯನ್ನು ಬದಲಾವಣೆ ಮಾಡಿದ್ದಾರೆ. ಸಚಿವ ಗೋಪಾಲಯ್ಯ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಆನಂದ್ ಸಿಂಗ್ ಅವರಿಗೆ ಅರಣ್ಯ ಹಾಗೂ ಪರಿಸರ ಖಾತೆ, ಶಿವರಾಮ್ ಹೆಬ್ಬಾರ್ ಅವರಿಗೆ ಮೊದಲು ನೀಡಿದ್ದ ಕಾರ್ಮಿಕ ಖಾತೆಯೊಂದಿಗೆ ಸಕ್ಕರೆ ಖಾತೆ ಹೆಚ್ಚುವರಿಯಾಗಿ ನೀಡಲಾಗಿದ್ದು, ಹಾಗೂ ಬಿ.ಸಿ ಪಾಟೀಲ್ ಅವರಿಗೆ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ನೀಡಿದ್ದಾರೆ. ಹಂಚಿಕೆ ಮಾಡಿದ ಪರಿಷ್ಕೃತ ಪಟ್ಟಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೃಢಿಕರಣಕ್ಕಾಗಿ ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದ್ದು, ರಾಜ್ಯಪಾಲರ ಸಹಿಯಾದ ಬಳಿಕ ಸಂಜೆ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.










