ಮೈಸೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಿನ್ನೆ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಮೆಗಾ ಡೈರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.