ಮಂಡ್ಯ ಬಸ್ ದುರಂತದಲ್ಲಿ ಮೃತಪಟ್ಟ ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಕುಮಾರಸ್ವಾಮಿ…

392
firstsuddi

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದಲ್ಲಿ ಸಂಭವಿಸಿದ ಭೀಕರ ಬಸ್​​ ದುರಂತ ನಡೆದ ಸ್ಥಳಕ್ಕೆ ಸಿಎಂ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದು, ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಹಣ ನೀಡೋದಾಗಿ ಮುಖ್ಯಮಂತ್ರಿ  ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಹಾಗೂ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸಲು ದೇವರು ಶಕ್ತಿ ನೀಡಲಿ ಎಂದು ಅವರು ಪ್ರಾರ್ಥಿಸಿದರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ, ಶಾಸಕರಾದ ರವಿಂದ್ರ ಶ್ರೀಕಂಠಯ್ಯ ಅವರು ಹಾಜರಿದ್ದರು.