ತುಮಕೂರು: ಸಿದ್ಧಗಂಗಾ ಮಠದ ಡಾ. ಶಿವಕುಮಾರ ಶ್ರೀಗಳ ಆರೋಗ್ಯ ಸ್ಥಿತಿ ಏರುಪೇರು ಹಿನ್ನೆಲೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ನಿಗದಿಯಾಗಿದ್ದ ಹಿರೇಕೆರೂರು ಭೇಟಿ ಕಾರ್ಯಕ್ರಮ ರದ್ದುಪಡಿಸಿದ್ದು, ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಅರೋಗ್ಯ ವಿಚಾರಿಸಲಿದ್ದಾರೆ. ಸಿ ಎಂ ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ಮಠದ ಕಿರಿಯ ಸ್ವಾಮೀಜಿ ಸಿದ್ದಲಿಂಗ ಸ್ವಾಮಿಜಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಶ್ರೀಗಳ ಆರೋಗ್ಯದ ಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ.










