ಬೆಂಗಳೂರು:ಉಪಮೇಯರ್ ರಮೀಳಾ ಅವರ ನಿಧನದ ಸುದ್ದಿ ತಿಳಿದು ನನಗೆ ದಿಗ್ಭ್ರಮೆಯಾಯಿತು. ಅವರೊಬ್ಬ ಪ್ರಾಮಾಣಿಕ ಸಾಮಾಜಿಕ ಕಾರ್ಯಕರ್ತರು, ಅವರು ನಮ್ಮೊಂದಿಗೆ ಇನ್ನಿಲ್ಲ ಎಂಬುದನ್ನು ಅರಗಿಸಿಕೊಳ್ಳುವುದು ಕಷ್ಟ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಟಿಸಿದ್ದು, ನಿನ್ನೆಯಷ್ಟೆ ಅವರು ನಮ್ಮ ಮೆಟ್ರೋ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಭಾಗವಹಿಸಿದ್ದರು. ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಯ ದುಃಖವನ್ನು ಭರಿಸುವ ಸ್ಥೈರ್ಯ ಅವರ ಕುಟುಂಬಕ್ಕೆ ಸಿಗಲಿ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.











