ಚಿಕ್ಕಮಗಳೂರು : ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಶೃಂಗೇರಿಗೆ ಭೇಟಿ ನೀಡಿದ್ದು, ಶೃಂಗೇರಿ ಮಠದ ಗುರು ನಿವಾಸದಲ್ಲಿ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಸ್ವಾಮೀಜಿ ವಿಧುಶೇಖರ್ ಸ್ವಾಮೀಜಿ ಅವರ ಬಳಿ ನಿಖಿಲ್ ಕುಮಾರಸ್ವಾಮಿ ಅವರ ನಾಮಪತ್ರವನ್ನು ಇಟ್ಟು ಆಶೀರ್ವಾದ ಪಡೆದಿದ್ದಾರೆ.









