ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶವನ್ನು ಉದ್ಘಾಟಿಸಿದ ಸಿಎಂ ಕುಮಾರಸ್ವಾಮಿ…

227
firstsuddi

ಬೆಂಗಳೂರು: ಬೆಂಗಳೂರಿನ ಪೊಲೀಸ್ ಕೇಂದ್ರ ಕಛೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವರಾದ ಎಂ.ಬಿ ಪಾಟೀಲ್, ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್. ರಾಜು, ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದ ಸಂದರ್ಭದಲ್ಲಿ ಬೆಂಗಳೂರಿನ ಪೊಲೀಸ್ ಕೇಂದ್ರ ಕಛೇರಿಯಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಎಂ.ಬಿ ಪಾಟೀಲ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಾಮೂಹಿಕ ಫೋಟೋ ಸೆಷನ್ ನಲ್ಲಿ ಭಾಗವಹಿಸಿದ್ದರು.