ತುಮಕೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಸಿದ್ದಗಂಗಾ ಮಠದ ಶ್ರೀ ಡಾ ಶಿವಕುಮಾರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಿವಕುಮಾರ ಶ್ರೀಗಳು ಇಳಿ ವಯಸ್ಸಿನಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿರುವುದು ವೈದ್ಯಕೀಯ ಲೋಕಕ್ಕೆ ಅಚ್ಚರಿ ಮತ್ತು ಪವಾಡ ಸದೃಶವಾಗಿದೆ. ಶ್ರೀಗಳು ಆರೋಗ್ಯವಾಗಿದ್ದು, ಯಾವುದೇ ಆತಂಕಬೇಡ. ಶ್ರೀಗಳ ಆರೋಗ್ಯ ಸುಧಾರಣೆಗಾಗಿ ವೈದ್ಯರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ವೈದ್ಯರ ತಂಡಕ್ಕೆ ಭಕ್ತರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.










