ಬೆಂಗಳೂರು: ಮೆಟ್ರೊ ರೈಲು ಹಳಿಗೆ ಯುವಕನೊಬ್ಬ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ್ಯಾಷನಲ್ ಕಾಲೇಜು ನಿಲ್ದಾಣದಲ್ಲಿ ನಡೆದಿದ್ದು, ವೇಣು ಆತ್ಮಹತ್ಯೆಗೆ ಯತ್ನಿಸಿದ ಯುವಕ. ಮೊಬೈಲ್ ಹೆಚ್ಚಾಗಿ ಬಳಸಬೇಡ ಎಂದು ತಾಯಿ ಹೇಳಿದ್ದಕ್ಕೆ ವೇಣು ನಮ್ಮ ಮೆಟ್ರೋ ರೈಲು ಹಳಿಯ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದ್ದು, ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ ನಿಮ್ಹಾನ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ ಯುವಕನ ಆರೋಗ್ಯ ವಿಚಾರಿಸಿದರು.
.










