ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ತಜ್ಞರು ಪಾಲ್ಗೊಂಡಿದ್ದರು.










