ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ…

402
firstsuddi

ಬೆಂಗಳೂರು: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಂತೆ ಇಂಧನ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಯವರು ಇಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದ್ದು, ಕೇಂದ್ರ ಸರ್ಕಾರ ಒಪ್ಪಂದದ ಪ್ರಕಾರ ರಾಜ್ಯಕ್ಕೆ ಕೊಡಬೇಕಿದ್ದ ಕಲ್ಲಿದ್ದಲು ಪೂರೈಕೆ ಆಗದಿರುವುದರಿಂದ ರಾಯಚೂರು ಥರ್ಮಲ್ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ. ಕೇಂದ್ರದ ವಿದ್ಯುತ್ ಗ್ರಿಡ್ ನಿಂದ ರಾಜ್ಯಕ್ಕೆ ಸಮ ಪ್ರಮಾಣದಲ್ಲಿ ವಿದ್ಯುತ್ ಸರಬರಾಜು ಆಗುತ್ತಿಲ್ಲ.  ಹಾಗಾಗಿ ಸೋಲಾರ್ ಮತ್ತು ಹೈಡ್ರೊ ಪವರ್ ಆದರಿಸಿ ಲೋಡ್ ಶೆಡ್ಡಿಂಗ್ ಇಲ್ಲದೆ ರಾಜ್ಯದಲ್ಲಿ ವಿದ್ಯುತ್ ಸರಬರಾಜು ಮಾಡಬೇಕು ಎಂದು ಬೆಸ್ಕಾಂ, ಜೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ ವಿಭಾಗಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಆದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ.