ತುಮಕೂರು : ಸಿಎಂ ಸಿದ್ದರಾಮಯ್ಯ ಗುರುವಾರ ಸಚಿವ ಟಿಬಿ ಜಯಚಂದ್ರ ಪ್ರತಿನಿಧಿಸುವ ಕ್ಷೇತ್ರವಾದ ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಪ್ರವಾಸ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾಮಗಾರಿ ಗಳ ಶಂಕುಸ್ಥಾಪನೆ ಹಾಗೂ ಉದ್ವಾಟನೆ ಮಾಡಲಿದ್ದು, ಇಂದಿರಾ ಕ್ಯಾಂಟೀನ್ ಉದ್ಘಾಟನೆ ಹಾಗೂ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣೆ ,ನಿವೇಶನ ಹಕ್ಕು ಪತ್ರ ವಿತರಣೆ ಮಾಡಲಿದ್ದಾರೆ. ಒಟ್ಟು 868.47 ಕೋಟಿ ವೆಚ್ಚದ ವಿವಿಧ ಕಾಮಗಾರಿ ಗಳ ಶಂಕುಸ್ಥಾಪನೆ ಮಾಡಿ, ಇದರ ಜೊತೆ 236.50 ಕೋಟಿ ವೆಚ್ಚದ ವಿವಿಧ ಕಾಮಗಾರಿ ಗಳ ಉದ್ವಾಟನೆ ಮಾಡಲಿದ್ದಾರೆ. ಶಿರಾ ನಗರದ ವಿವೇಕಾನಂದ ಕ್ರೀಡಾಂಗಣದಲ್ಲಿ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಬೆಳಿಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಸಿಎಂ ಆಗಮಿಸಲಿದ್ದಾರೆ. ಸದ್ಯ ತುಮಕೂರು ವಿವಿ ಗೇಸ್ಟ್ ಹೌಸ್ ನಲ್ಲಿ ವಾಸ್ತವ್ಯವಿರುವ ಸಿದ್ದರಾಮಯ್ಯ, ಕಾರ್ಯಕ್ರಮ ದಲ್ಲಿ ಸಚಿವ ಜಯಚಂದ್ರ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ,ಕಾರ್ಯಕರ್ತರು ಭಾಗಿಯಾಗಲಿದ್ದಾರೆ.