ಕ್ಯಾಂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ- ದಂಪತಿ ಸ್ಥಳದಲ್ಲೇ ಸಾವು…

131
firstsuddi

ಹೊಸಕೋಟೆ : ಕ್ಯಾಂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ. ಆಂಧ್ರ ಮೂಲದ ಸುಬ್ಬಯ್ಯ(45) ಹಾಗೂ ಅರುಣ(40) ಮೃತ ದಂಪತಿ ಎಂದು ಗುರುತಿಸಲಾಗಿದ್ದು, ಮೃತ ದಂಪತಿ ಆಂಧ್ರದಿಂದ ಬೆಂಗಳೂರಿಗೆ ತಮ್ಮ ಬೈಕ್‍ನಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್‍ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.