ಬೆಂಗಳೂರು : ಸ್ಯಾಂಡಲ್‍ವುಡ್‍ನ ಹಿರಿಯ ಹಾಸ್ಯ ನಟ ಮೈಕಲ್ ಮಧು ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಬಿದ್ದು ಕಾಲಿಗೆ ಗಂಭೀರವಾಗಿ ಪೆಟ್ಟು ಬಿದ್ದು ತೀವ್ರ ಅಸ್ವಸ್ಥರಾಗಿದ್ದರು ಎನ್ನಲಾಗಿದ್ದು, ಹೀಗಾಗಿ ಅವರನ್ನು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಇವರು ಕನ್ನಡದ ಸೂರ್ಯವಂಶ, ವಾಲಿ ಓಂ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ.










