ಬೆಂಗಳೂರು: ಅರ್ಜುನ್ ಸರ್ಜಾ ವಿರುದ್ಧ ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್ ವಿರುದ್ಧ ಹಿರಿಯ ನಟ ಅರ್ಜುನ್ ಸರ್ಜಾ ಮಾವ ರಾಜೇಶ್ ಅವರು ಚಲನಚಿತ್ರ ವಾಣಿಜ್ಯ ಮಂಡಳಿಗೆ ಇಂದು ದೂರು ನೀಡಿದ್ದಾರೆ. ರಾಜೇಶ್ ಸಲ್ಲಿಸಿರುವ ದೂರಿನ ಬಗ್ಗೆ ತುರ್ತು ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ತಿಳಿಸಿದ್ದಾರೆ.










