ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಶಾಲೆಗಳಿಗೆ ಅಭಿನಂದನೆಗಳು : ಹೆಚ್.ಡಿ. ಕುಮಾರಸ್ವಾಮಿ…

240
firstsuddi

ಬೆಂಗಳೂರು : ಇಂದು ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಉತ್ತೀರ್ಣರಾದ ವಿಧ್ಯಾರ್ಥಿಗಳಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಕಳೆದ ವರ್ಷಕ್ಕಿಂತ ತುಸು ಹೆಚ್ಚಾಗಿರುವುದು ಸಂತೋಷದ ವಿಷಯ. ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು, ಶಾಲೆಗಳಿಗೆ ಅಭಿನಂದನೆಗಳು. ಅನುತ್ತೀರ್ಣರಾದ ವಿದ್ಯಾರ್ಥಿಗಳು ನಿರಾಸೆ ಹೊಂದುವ ಅಗತ್ಯವಿಲ್ಲ. ಮುಂದಿನ ಬಾರಿ ಹೆಚ್ಚಿನ ಪರಿಶ್ರಮ ವಹಿಸಿ ಪರೀಕ್ಷೆ ಎದುರಿಸಿ, ಯಶಸ್ವಿಯಾಗಿ ಎಂದು ಟ್ವೀಟ್ ಮಾಡಿದ್ದಾರೆ.