ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಮುಖಂಡರ ನಿವಾಸ, ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್ -ಜೆಡಿಎಸ್ ಕಾರ್ಯಕರ್ತರು ಬೆಂಗಳೂರಿನ ಆದಾಯ ತೆರಿಗೆ ಇಲಾಖೆ ಕಚೇರಿ ಬಳಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಸಚಿವ ಡಿ ಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.










