ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ಇಂದು ಮಾತನಾಡಿದ ಶೋಭಾ ಕರಂದ್ಲಾಜೆ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಯಾವ ಪುರಷಾರ್ಥಕ್ಕಾಗಿ ಎಚ್ಎಎಲ್ ನೌಕರರೊಂದಿಗೆ ಸಂವಾದ ಮಾಡುತ್ತಿದ್ದಾರೋ ಗೊತ್ತಿಲ್ಲ.ರಾಫೇಲ್ ವಿಮಾನಗಳ ಖರೀದಿ ಬಗ್ಗೆ ಸಂಸತ್ ನಲ್ಲಿ ಸ್ಪಷ್ಟನೆ ಕೊಟ್ಟಿದ್ದೇವೆ. ಆದರೂ ರಾಹುಲ್ ಗಾಂಧಿ ಅವರು ಹೋದ ಕಡೆಯಲ್ಲಾ ರಫೇಲ್ ಯುದ್ಧ ವಿಮಾನ ಖರೀದಿ ಬಗ್ಗೆ ಒಂದೊಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ರಫೇಲ್ ಯುದ್ಧ ವಿಮಾನ ಖರೀದಿ ಬಗ್ಗೆ ಸಂಶಯ ಹುಟ್ಟು ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಸೈನಿಕರಿಗೆ ಅಗತ್ಯ ಸಾಮಾಗ್ರಿಗಳನ್ನು ಒದಗಿಸಲು ಕಾಂಗ್ರೆಸ್ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.










