ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಉತ್ತಮ ಫಲಿತಾಂಶ ಬಂದಿದೆ.- ದಿನೇಶ್ ಗುಂಡೂರಾವ್…

550
firstsuddi

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್  ಅವರು  ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗುತ್ತೆ ಎಂದು ಅಪಪ್ರಚಾರ ಮಾಡಿದ್ದರು ಆದರೆ ನಾವು ಚುನಾವಣೆಯಲ್ಲಿ ನಾವು ಅಧಿಕ ಸ್ಥಾನಗಳನ್ನು ಗೆದ್ದಿದ್ದೇವೆ. ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು, ಮತ ಹಾಕಿದ್ದಾರೆ. ಅಲ್ಲದೆ ಚುನಾವಣೆಯಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 2019ರ ಲೋಕಸಭಾ ಚುನಾವಣೆಯಲ್ಲೂ ಗೆಲುವು ಸಾಧಿಸುತ್ತೇವೆ. ಅದಕ್ಕಾಗಿ ದೊಡ್ಡ ಮಟ್ಟದ ತಯಾರಿ ಮಾಡಿಕೊಳ್ಳುತ್ತೇವೆ.ಅತಂತ್ರ ಆಗಿದ್ದ ಕಡೆಯಲ್ಲಿ ಮೈತ್ರಿ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯೋದಾಗಿ  ದಿನೇಶ್ ಗುಂಡೂರಾವ್ ತಿಳಿಸಿದರು.