ಬೆಂಗಳೂರು : ಲೋಕಸಭಾ ಚುನಾವಣೆ ಬಗ್ಗೆ ಹಾಗೂ ಸಮ್ಮಿಶ್ರ ಸರ್ಕಾರದಲ್ಲಿನ ಗೊಂದಲ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲು ನಗರದಲ್ಲಿ ಇಂದು ಕೆ.ಸಿ.ವೇಣುಗೋಪಾಲ್, ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಪದಾಧಿಕಾರಿಗಳ ಸಭೆ ನಡೆಸಲಾಗಿದ್ದು. ಮುಂಬರುವ ಲೋಕಸಭೆ ಚುನಾವಣೆಯ ಸಿದ್ದತೆ, ಬಗ್ಗೆ ಪದಾಧಿಕಾರಿಗಳಿಗೆ, ಜಿಲ್ಲಾ ಅಧ್ಯಕ್ಷರುಗಳಿಗೆ ಮಾರ್ಗಸೂಚಿ ನೀಡಲಾಗಿದ್ದು. ಬ್ಲಾಕ್ ಹಾಗೂ ತಾಲೂಕು ಮಟ್ಟದಲ್ಲಿ ಪಕ್ಷದ ಪರವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದ ನಾಯಕರು, ಆಗಸ್ಟ್ 15ರ ಒಳಗಾಗಿ ಅಗತ್ಯ ಬಿದ್ದ ಕಡೆ ಅಧ್ಯಕ್ಷರ ಬದಲಾವಣೆ ಮಾಡಲಾಗುವುದು ಎಂದು ತಿಳಿಸಿದ್ದು.ಮುಂದಿನ ಲೋಕಸಭಾ ಚುನಾವಣೆಯ ಸಿದ್ದತೆ ಬಗ್ಗೆ ಚರ್ಚೆಯನ್ನು ನಡೆಸಿದ್ದಾರೆ.