ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿರುವ ಭ್ರಷ್ಟ ಸರ್ಕಾರವನ್ನು ಕಿತ್ತು ಹಾಕುತ್ತೇವೆ.- ದಿನೇಶ್ ಗುಂಡೂರಾವ್…

655
firstsuddi

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೆಪಿಸಿಸಿ ಅದ್ಯಕ್ಷ ದಿನೇಶ್ ಗುಂಡೂರಾವ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿರುವ ಭ್ರಷ್ಟ ಸರ್ಕಾರವನ್ನು ಕಿತ್ತು ಹಾಕುತ್ತೇವೆ. ಬಿಜೆಪಿಯವರು ಕೇಂದ್ರದಿಂದ ಯಾವುದೇ ಯೋಜನೆಯನ್ನು ರಾಜ್ಯಕ್ಕೆ ತರುವಲ್ಲಿ ಮತ್ತು ರಾಜ್ಯದ ಯಾವುದೇ ಸಮಸ್ಯೆ ಬಗೆಹರಿಸೋಕೆ ಹೋರಾಡುತ್ತಿಲ್ಲ. ಕಾಂಗ್ರೇಸ್ ಹಾಗೂ ಜೆಡಿಎಸ್ ಸಮಿಶ್ರ ಸರ್ಕಾರ ಐದು ವರ್ಷ ಒಪ್ಪಂದವನ್ನು ಮಾಡಿಕೊಂಡಿದ್ದೇವೆ.ನಾವು ಐದು ವರ್ಷ ಸರ್ಕಾರವನ್ನು ನಡೆಸುತ್ತೇವೆ. ಆದರೆ ಕೆಲವರು ಸಮಿಶ್ರ ಸರ್ಕಾರ ಅತಂತ್ರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಅವರ ಪ್ರಯತ್ನ ಫಲಿಸುವುದಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯತೆ ಕಾಪಾಡುತ್ತಿದ್ದಾರೆ, ಮತ್ತೊಮ್ಮೆ ಸಿಎಂ ಆಗುತ್ತೇನೆ ಎಂದು ಜನರ ಒತ್ತಡದ ನಡುವೆ ಭಾಷಣ ಮಧ್ಯದಲ್ಲಿ ಸಿದ್ದರಾಮಯ್ಯ ಮಾತನಾಡಿದ್ದಾರೆ ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸಂಸದ ಪ್ರಹ್ಲಾದ ಜೋಶಿಯವರು ಅವರು ರಾಹುಲ್ ಗಾಂಧಿಯ ಬಗ್ಗೆ ಮಾತನಾಡಿರುವುದು ಸರಿಯಲ್ಲ ಎಂದು ದಿನೇಶ್ ಗುಂಡೂರಾವ್  ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.