ಅಡುಗೆ ಸಿಲಿಂಡರ್ ಸ್ಪೋಟ, ಮೂವರ ದುರ್ಮರಣ…

198
firstsuddi

ಬೆಂಗಳೂರು : ಅಡುಗೆ ಸಿಲಿಂಡರ್ ಸ್ಪೋಟಗೊಂಡು ಮೂವರು ಮೃತಪಟ್ಟಿರುವ ಘಟನೆ ನಗರದ ಬಾಣಸವಾಡಿ ಬಳಿ ನಡೆದಿದೆ. ಅಡುಗೆ ಮಾಡುವಾಗ ಸಿಲಿಂಡರ್ ಸ್ಪೋಟಗೊಂಡಿದೆ ಎಂದು ತಿಳಿದು ಬಂದಿದ್ದು, ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚುಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟಿದ್ದು, ಇನ್ನು ಒಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.