ಮಡಿಕೇರಿ : ಸೌದಿ ಅರೇಬಿಯಾದಿಂದ ಆಗಮಿಸಿದ್ದ ಕೊಡಗು ಮೂಲದ ವ್ಯಕ್ತಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆ, ಜಿಲ್ಲೆಯಾಧ್ಯಂತ ಮುಂಜಾಗೃತ ಕ್ರಮವಾಗಿ ಸಾರ್ವಜನಿಕರ ಹಿತಾಸಕ್ತಿಯಿಂದ ಜಿಲ್ಲೆಯಲ್ಲಿ 144(3) ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈಗಾಗಲೇ ರಾಜ್ಯಾಧ್ಯಂತ ಮಾರ್ಚ್ 31ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು, ಕೊಡಗು ಜಿಲ್ಲೆಯಲ್ಲಿ ಹೋಂ ಸ್ಟೇಗಳು, ಐಷರಾಮಿ ಹೋಟೆಲ್‍ಗಳು, ಲಾಡ್ಜ್ ಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ತಂಗುವುದನ್ನು ನಿಷೇಧಿಸಲಾಗಿದೆ.










