ಕೊರೊನಾ ಭೀತಿ-7,8 ಹಾಗೂ 9ನೇ ತರಗತಿಯ ಪರೀಕ್ಷೆಗಳು ರದ್ದು : ಸಚಿವ ಸುರೇಶ್ ಕುಮಾರ್.

160
firstsuddi

ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹೀಗಾಗಿ 7, 8 ಹಾಗೂ 9ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಈ ಮೂರು ವರ್ಗದ ಎಲ್ಲಾ ವಿದ್ಯಾರ್ಥಿಗಳನ್ನು ನೇರವಾಗಿ ಮುಂದಿನ ತರಗತಿಗೆ ಕಳುಹಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಮ್ಮ  ಫೇಸ್‍ಬುಕ್ ಖಾತೆಯಲ್ಲಿ ಲೈವ್ ವೀಡಿಯೋ ಮಾಡುವ ಮೂಲಕ ಈ ಕುರಿತು ಇದ್ದ ಎಲ್ಲಾ ಗೊಂದಲಗಳಿಗೆ ಸ್ಪಷ್ಟನೆ ನೀಡಿದ್ದಾರೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಈ ಹಿಂದೆ 1 ರಿಂದ 6ನೇ ತರಗತಿ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲು ಸೂಚಿಸಿದ್ದರು. ಆದರೆ ಈಗಾ 7,8 ಹಾಗೂ 9ನೇ ತರೆಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಮುಂದಿನ ತರಗತಿಗಳಿಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಅಲ್ಲದೇ 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿ ನಡೆದ ರೂಪಣಾತ್ಮಕ ಹಾಗೂ ಸಂಕಲನಾತ್ಮಕ ಪರೀಕ್ಷೆಗಳ ಆಧಾರದ ಮೇಲೆ 9ನೇ ತರಗತಿ ವಿದ್ಯಾರ್ಥಿಗಳನ್ನು 10ನೇ ತರಗತಿಗೆ ಕಳುಹಿಸಬೇಕು. ಒಂದು ವೇಳೆ ಅನುತ್ತೀರ್ಣರಾಗುವವರು ಇದ್ದರೆ ಅವರನ್ನು ರಜಾ ಅವಧಿಯಲ್ಲಿ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಉತ್ತಮಗೊಳಿಸಬೇಕು. ಬಳಿಕ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ ತಿಂಗಳ ಒಳಗೆ ಮತ್ತೊಮ್ಮೆ ಪರೀಕ್ಷೆ ನೀಡಿ ಅವರನ್ನು ಉತ್ತೀರ್ಣಗೊಳಿಸುವ ನಿರ್ಧಾರವನ್ನು ಶಾಲೆಗಳು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸುವುದಿಲ್ಲ. ಏಪ್ರಿಲ್ 14ರ ಬಳಿಕ ಹೊಸ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಹಾಗೂ ದ್ವಿತೀಯ ಪಿಯುಸಿಯ ಒಂದು ಭಾಷೆಯ ಪರೀಕ್ಷೆ ಕೂಡಾ ಬಾಕಿ ಇದ್ದು, ಅದೂ ಕೂಡಾ ಏಪ್ರಿಲ್ 14ರ ಬಳಿಕ ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.