ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾದ ಬೆನ್ನಲ್ಲೇ 10 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್…

219
firstsuddi

ಬಾಗಲಕೋಟೆ : ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾದ ಬೆನ್ನಲ್ಲೇ 10 ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ಒಳಗಾಗಿರುವ ಆಘಾತಕಾರಿ ಸಂಘತಿ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದ್ದು, ಉಳಿದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆತಂಕವನ್ನು ಉಂಟುಮಾಡಿದೆ. ಮಹಾಮಾರಿ ಕೊರೊನಾ ಸೋಂಕಿನ ಭೀತಿಯಿಂದಾಗಿ ಮುಚ್ಚಲ್ಪಟ್ಟಿದ್ದ ಪದವಿ ಕಾಲೇಜುಗಳು 8 ತಿಂಗಳ ಬಳಿಕ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ವರದಿ ಇದ್ದರೆ ಮಾತ್ರ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, ಈ ಹಿನ್ನೆಲೆ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಒಳಗಾಗಿದ್ದರು. ಈ ಪೈಕಿ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಸೋಂಕಿತ ವಿದ್ಯಾರ್ಥಿಗಳಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲದೆ ಇರುವುದರಿಂದ ರಾಜ್ಯ ಆರೋಗ್ಯ ಇಲಾಖೆ ವಿದ್ಯಾರ್ಥಿಗಳಿಗೆ ಹೋಮ್ ಐಸೋಲೇಷನ್ ನಲ್ಲಿ ಇರುವಂತೆ ಸೂಚನೆ ನೀಡಿದೆ.