ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರಿಗೆ ಕೊರೊನಾ ಪಾಸಿಟಿವ್…

121
firstsuddi

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ತಮಗೆ ಸೋಂಕು ತಗುಲಿರುವ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದು, ನಮಸ್ಕಾರಗಳು, ಆತ್ಮಿಯರೇ, ಇಂದು COVID-19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ. ಚಿಕಿತ್ಸೆ ಕಾರಣ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ.ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಚಿಕಿತ್ಸೆಗೆ ಒಳಪಡಬೇಕೆಂದು ವಿನಂತಿ. ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.