ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೂ ಕೊರೊನಾ ಪಾಸಿಟಿವ್…

117
firstsuddi

ಬೆಂಗಳೂರು : ಮಹಾಮಾರಿ ಕೊರೊನಾ ಸೋಂಕು ರಾಜಕಾರಣಿಗಳನ್ನು ಬೆನ್ನು ಬಿಡದೇ ಕಾಡುತ್ತಿದ್ದು, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ತಮಗೇ ಸೋಂಕು ತಗುಲಿರುವ ಕುರಿತು ಸ್ವತಃ ಸಚಿವರೇ ತಮ್ಮ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದು, ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.