ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಹೋಮ್ ಐಸೋಲೇಷನ್ ನಲ್ಲಿ ಇದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಕುರಿತು ಸ್ವತಃ ಜೆ.ಪಿ. ನಡ್ಡಾ ಅವರೇ ತಮ್ಮ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನನಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ, ಕೊರೊನಾ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ತಗುಲಿರುವುದು ದೃಢವಾಗಿದೆ. ನಾನು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆಯಂತೆ ಮನೆಯಲ್ಲೇ ಹೋಂ ಐಸೋಲೇಷನ್ ನಲ್ಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.










