ಹಾಸನ : ಹಾಸನ ಉಸ್ತುವಾರಿ ಹಾಗೂ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಗೋಪಾಲಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ಸ್ವತಃ ಗೋಪಾಲಯ್ಯ ಅವರೇ ತಿಳಿಸಿದ್ದು, ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾವುದೇ ಆತಂಕ ಇಲ್ಲ. ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.










