ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೊನಾ ಪಾಸಿಟಿವ್…

124
firstsuddi

ಬೆಂಗಳೂರು : ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಸ್ವತಃ ಜಮೀರ್ ಅಹ್ಮದ್ ಖಾನ್ ಅವರೇ ತಮ್ಮ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಸಣ್ಣ ಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರ ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತಢನೆ ಎಂದು ಟ್ವೀಟ್ ಮಾಡಿದ್ದಾರೆ.