ಬೆಂಗಳೂರು : ಸಂಸದ ಡಿ.ಕೆ. ಸುರೇಶ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ. ಸುರೇಶ್ ಅವರ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿರುವ ಮಾಹಿತಿ ತಿಳಿಯುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇಬ್ಬರ ನಿವಾಸದ ಮುಂದೆ ಭಾರಿ ಸಂಖ್ಯೆಯಲ್ಲಿ ಭಾಗಿಯಾಗಿದ್ದರು. ಮನೆಯ ಮುಂದೆ ಜನ ಹೆಚ್ಚು ಜಮಾಯಿಸಿದ್ದರಿಂದ ಡಿ.ಕೆ. ಸುರೇಶ್ ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಪರೀಕ್ಷಾ ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.










