ಬೆಂಗಳೂರು : ಇತ್ತೀಚೆಗೆ ಮಹಾಮಾರಿ ಕೊರೊನಾ ವೈರಸ್ ರಾಜಕಾರಣಿಗಳನ್ನು ಬೆಂಬಿಡದೆ ಕಾಡುತ್ತಿದ್ದು, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಸ್ವತಃ ಸಚಿವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದು, ಆತ್ಮೀಯರೆ ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನ ಎಂದು ತಿಳಿಸಿದ್ದಾರೆ.
ಆತ್ಮೀಯರೆ
ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ.I have tested positive for #COVID19 . As I am asymptomatic, as per doctor's advise I am in home quarantine.
— Pralhad Joshi (@JoshiPralhad) October 7, 2020










