ಕಲಬುರಗಿ : ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕಲಬುರಗಿಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ವೈದ್ಯರೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ದೃಢಪಟ್ಟಿದ್ದು, ಇವರು ಮೃತ ವೃದ್ಧನಿಗೆ ಅವರ ಮನೆಯಲ್ಲಿಯೇ ಚಿಕಿತ್ಸೆ ನೀಡಿದ್ದರು ಎಂದು ಜಿಲ್ಲಾಧಿಕಾರಿ ಬಿ. ಶರತ್ ಅವರು ಸ್ಪಷ್ಟಪಡಿಸಿದ್ದಾರೆ










