ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 31ಕ್ಕೆ ಏರಿಕೆ-ಸೋಂಕಿತರ ಸಂಖ್ಯೆ 1127…

156
firstsuddi

ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 1127ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಲಾಕ್‍ಡೌನ್ ಆದೇಶವಿದ್ದರೂ ಜನರು ಬೇಕಾಬಿಟ್ಟಿ ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡುವುದು ಹಾಗೂ ಮಾರುಕಟ್ಟೆಯಲ್ಲಿ ಜನಜಂಗುಳಿ ಹೆಚ್ಚಾಗುತ್ತಲೇ ಇದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 12 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.