ಬೀಜಿಂಗ್ : ಕೊರೊನಾ ವೈರಸ್‍ಗೆ ಚೀನಾ ತತ್ತರಿಸಿದ್ದು, ಚೀನಾದಲ್ಲಿ ಕೊರೊನಾ ವೈರಸ್‍ಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಈವರೆಗೆ ವೈರಸ್‍ಗೆ 500 ಮಂದಿ ಬಲಿಯಾಗಿದ್ದಾರೆ. ಅಲ್ಲದೇ ಇನ್ನೂ ಹೊಸದಾಗಿ 3235 ಮಂದಿಯಲ್ಲಿ ಸೋಂಕು ತಗುಲಿರುವುದಾಗಿ ದೃಢಪಟ್ಟಿದೆ. ಈಗಾಗಲೇ 24.324 ಮಂದಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಅಲ್ಲದೇ ಸೋಮವಾರ ಒಂದೇ ದಿನದಲ್ಲಿ 3235 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿರುವುದು ಆತಂಕ ಸೃಷ್ಠಿಸಿದ್ದು, ದಿನದಿಂದ ದಿನಕ್ಕೆ ಸಾವಿನ ಹೆಚ್ಚುತ್ತಲೇ ಇದೆ.










