ರಾಜ್ಯದಲ್ಲಿ ಇಂದು ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ದೃಢ-ಸೋಂಕಿತರ ಸಂಖ್ಯೆ 105ಕ್ಕೆ ಏರಿಕೆ…

215
firstsuddi

ಬೆಂಗಳೂರು : ರಾಜ್ಯದಲ್ಲಿ ಇಂದು ಹೊಸದಾಗಿ ನಾಲ್ಕು ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. ನಾಲ್ವರ ಪೈಕಿ ಇಬ್ಬರು ನಂಜನಗೂಡಿನ ಔಷಧ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂಧಿಗಳಾಗಿದ್ದು, ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೂ ಬೆಂಗಳೂರಿನ 33 ವರ್ಷದ ವ್ಯಕ್ತಿಯಲ್ಲಿ ಕೊರೊನಾ ದೃಡವಾಗಿದ್ದು, ಈ ವ್ಯಕ್ತಿಗೆ 103ನೇ ಸೋಂಕಿತ ವ್ಯಕ್ತಿಯಿಂದ ಸೋಂಕು ತಗುಲಿದೆ. ಸೋಂಕಿತ 102ನೇ ವ್ಯಕ್ತಿ ಬೆಂಗಳೂರಿನ 24 ವರ್ಷದ ಯುವಕನಾಗಿದ್ದು, ಇವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದೇ ಇರುವುದರಿಂದ ಆ ವ್ಯಕ್ತಿಗೆ ಹೇಗೆ ಸೋಂಕು ತಗುಲಿದೆ ಎಂಬುವುದರ ಬಗ್ಗೆ ತನಿಖೆ ನಡೆಯುತ್ತಿದೆ.