ಕಲಬುರಗಿಯಲ್ಲಿ ಒಂದು ವರ್ಷದ ಮಗುವಿನಲ್ಲಿ ಕೊರೊನಾ ಸೋಂಕು ದೃಢ…

156
firstsuddi

ಕಲಬುರಗಿ : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಜಿಲ್ಲೆಯಲ್ಲಿ ಒಂದು ವರ್ಷದ ಕಂದಮ್ಮನಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ತಾಲ್ಲೂಕಿನ ಕವಲಗಾ ಗ್ರಾಮದ ಮಗು ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿತ್ತು. ಹೀಗಾಗಿ ಮಗುವನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗುವಿನಲ್ಲಿ ಕೊರೊನಾ ಲಕ್ಷಣಗಳು ಕಂಡುಬಂದಿದ್ದರಿಂದ ಮಗುವನ್ನು ಜಿಮ್ಸ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮಗುವಿನ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಇದೀಗ ಪ್ರಯೋಗಾಲಯದಿಂದ ವರದಿ ಬಂದಿದ್ದು, ವರದಿಯಲ್ಲಿ ಮಗುವಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಅಲ್ಲದೇ ಮಗುವಿನ ಪೋಷಕರು ಹಾಗೂ ಕುಟುಂಬಸ್ಥರಲ್ಲಿ ಯಾರು ವಿದೇಶಕ್ಕೆ ತೆರಳಿ ಬಂದವರಿಲ್ಲ ಎಂದು ತಿಳಿದು ಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಈ ಮೊದಲು ಮಗುವಿಗೆ ಚಿಕಿತ್ಸೆ ನೀಡಿದ ವೈದ್ಯರನ್ನು ತಪಾಸಣೆಗೆ ಒಳಪಡಿಸಲು ಜಿಲ್ಲಾಡಳಿತ ಮುಂದಾಗಿದೆ.