ಭಾರತದಲ್ಲಿ 28 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ : ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್.

201
firstsuddi

ನವದೆಹಲಿ : ವಿಶ್ವದಾಧ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಾರಣಾಂತಿಕ ಕೊರೊನಾ ವೈರಸ್ ಇದೀಗಾ ಭಾರತಕ್ಕೂ ಲಗ್ಗೆ ಇಟ್ಟಿದ್ದು, ಭಾರತದಲ್ಲಿ ಈವರೆಗೆ 28 ಕೊರೊನಾ ಪ್ರಕರಣಗಳು ಪತ್ತೆಯಾಗಿರುವುದಾಗಿ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಒಟ್ಟು 28 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದಾಗಿ ದೃಢಪಟ್ಟಿದ್ದು, 12 ಮಂದಿ ಭಾರತೀಯರು ಹಾಗೂ 16 ಮಂದಿ ವಿದೇಶಿಗರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಭಾರತಕ್ಕೆ ಬಂದಿಳಿದ 16 ಇಟಲಿ ಪ್ರಜೆಗಳಲ್ಲಿ ಈ ಮಾರಣಾಂತಿಕ ಸೋಂಕು ಕಾಣಿಸಿಕೊಂಡಿದ್ದು, ದೆಹಲಿಯಲ್ಲಿ 1, ಆಗ್ರಾದಲ್ಲಿ 6, ಕೇರಳದಲ್ಲಿ 3 ಹಾಗೂ ತೆಲಂಗಾಣದಲ್ಲಿ ಒಬ್ಬರಿಗೆ ಈ ವೈರಸ್ ಕಾಣಿಸಿಕೊಂಡಿದ್ದು, ಹೀಗಾಗಿ ಎಲ್ಲಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.