ಮೂಡಿಗೆರೆ ಪಟ್ಟಣ ಪಂಚಾಯಿತಿ ವಿರುದ್ದ ರಸ್ತೆಯ ಗುಂಡಿಗೆ ಗಿಡ ನೆಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಕ್ರಿಯೇಟಿವ್ ಮೈಂಡ್ಸ್ …

1328
firstsuddi

ಮೂಡಿಗೆರೆ- ಪಟ್ಟಣದ ವೇಣುಗೋಪಾಲಸ್ವಾಮಿ ದೇವಸ್ಥಾನ ಸಮೀಪ ರಸ್ತೆ ಗುಂಡಿ ಬಿದ್ದು ವರ್ಷ ಕಳೆದರು ಕ್ಯಾರೆ ಎನ್ನದ ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ದ ಕ್ರಿಯೇಟಿವ್ ಮೈಂಡ್ಸ್ ಅಸೋಸಿಯೇಷನ್ ವತಿಯಿಂದ ಗುಂಡಿಗೆ ಗಿಡ ನೇಡುವ ಮೂಲಕ ಪಟ್ಟಣ ಪಂಚಾಯಿತಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಿಯೇಟಿವ್ ಮೈಂಡ್ಸ್ ಅಧ್ಯಕ್ಷ ಮನೋಜ್ ಮಾತನಾಡಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಎಮ್ಮೆ ಚರ್ಮದವರು ಇದ್ದಂತೆ ನಾವು ಹಲವು ಬಾರಿ ಮನವಿ ಕೊಟ್ಟರು ಪ್ರಯೋಜನವಾಗಿಲ್ಲ.

firstsuddi

ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದೇ ರಸ್ತೆಯಲ್ಲಿ ಒಡಾಡುತ್ತಾರೆ ಆದರೂ ಈ ರಸ್ತೆ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳುವುದಿಲ್ಲ. ಹಲವು ಬಾರಿ ವಾಹನ ಅಪಘಾತವು ಈ ರಸ್ತೆಯಲ್ಲಿ ಸಂಭವಿಸಿದ್ದು, ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿರುವುದು ವಿಷಾದನೀಯ , ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಇನ್ನಾದರೂ ಎಚ್ಚೆತ್ತು ಕೂಡಲೇ ರಸ್ತೆ ಸರಿಪಡಿಸಬೇಕು ಇಲ್ಲದಿದ್ದಲ್ಲಿ ಪಟ್ಟಣ ಪಂಚಾಯಿತಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕ್ರಿಯೇಟಿವ್ ಮೈಂಡ್ಸ್ ಸದಸ್ಯರು ಉಪಸ್ಥಿತರಿದ್ದರು.