ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ಕಾಳ್ಗಿಚ್ಚು ಉಂಟಾಗಿದ್ದು, ಅರಣ್ಯ ಪ್ರದೇಶದ ಸಹಸ್ರಾರು ಎಕರೆ ಭೂಮಿಯಲ್ಲಿದ್ದ ಮರಗಿಡಗಳು, ವಾಸವಾಗಿದ್ದ ಪ್ರಾಣಿ ಪಕ್ಷಿಗಳು ಸುಟ್ಟು ಕರಕಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಟ್ವಿಟ್ ಮೂಲಕ ಮನವಿ ಮಾಡಿದ್ದಾರೆ. ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ ಮಾಡಿಕೊಂಡಿದ್ದಾರೆ.












