ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ.ಪರಮೇಶ್ವರ್…

268
firstsuddi

ತುಮಕೂರು: ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್  ಅವರು ಇಂದು ಸಿದ್ದಗಂಗಾ ಮಠದ ಶ್ರೀ ಡಾ ಶಿವಕುಮಾರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು  ವಿಚಾರಿಸಿದರು.  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶ್ರೀಗಳ ಆರೋಗ್ಯ ಸುಧಾರಿಸಿದೆ. ಅವರು ಸಹ ಚಿಕಿತ್ಸೆಗೆ ಸ್ಪಂದಿಸುತ್ತಿರುವುದರಿಂದ ಶೀಘ್ರವೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ. ಯಾರೂ ಕೂಡ ಆತಂಕ ಪಡಬೇಕಿಲ್ಲ ಎಂದು ವೈದ್ಯರು ಭರವಸೆ ನೀಡಿದ್ದಾರೆ ಎಂದು ಪರಮೇಶ್ವರ್ ಅವರು ತಿಳಿಸಿದ್ದಾರೆ.