ಬೆಂಗಳೂರು: ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಸಭೆ ಇಂದು ನಡೆದಿದ್ದು,ಇದಕ್ಕೆ ಸಂಬಂದಿಸಿದಂತೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಟ್ವಿಟ್ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಾದ್ಯಂತ ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ಸ್ಪರ್ಧಿಸುತ್ತಿರುವ ಎಲ್ಲಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷಗಳದ್ದೇ ಮೇಲುಗೈ ಇದೆ. ಇದಕ್ಕಾಗಿ ಮೈತ್ರಿ ಕಾರ್ಯತಂತ್ರ ರೂಪಿಸಲು ಇಂದು ಕುಮಾರಕೃಪ ಅತಿಥಿ ಗೃಹದಲ್ಲಿ ಕರೆದಿದ್ದ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಚರ್ಚಿಸಿದೆವು ಎಂದು ಡಾ. ಜಿ ಪರಮೇಶ್ವರ್ ಅವರು ಟ್ವಿಟ್ ಮಾಡಿದ್ದಾರೆ.










