ಬೆಂಗಳೂರು- ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಹೈ ಕಮಾಂಡ್ ಗೀನ್ ಸಿಗ್ನಲ್ ಕೂಡ ಸಿಕ್ಕಿತ್ತು. ಆದರೆ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದು, ಕೆ.ಪಿ.ಸಿ.ಸಿ ಅಧ್ಯಕ್ಷರಾದ ಪರಮೇಶ್ವರ್ ಅವರು ಧರ್ಮಸ್ಥಳಕ್ಕೆ ತೆರಳಿ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿ ಅನುಮತಿ ಪಡೆದಿದ್ದರು .ಆದರೂ ಅವರ ಅನುಪಸ್ಥಿತಿಯಲ್ಲಿ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಪ್ರಕಟಿಸಿದರೆ ಬಂಡಾಯದಿಂದಾಗುವ ಎಲ್ಲಾ ವಿವಾದಗಳನ್ನು ತಾನೇಕೆ ಎಳೆದುಕೊಳ್ಳಬೇಕು ಎಂದು ಬಜೆಟ್ ಅಧಿವೇಶನ ನಂತರ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ನೇಮಕವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.