ನವದೆಹಲಿ : ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೊಸ ಡೆತ್ ವಾರೆಂಟ್ ಜಾರಿ ಮಾಡುವಂತೆ ದೆಹಲಿ ಸರ್ಕಾರ ಪಟಿಯಾಲ ಹೌಸ್ ಕೋರ್ಟ್ಗೆ ಮನವಿ ಮಾಡಿದೆ. ನಿರ್ಭಯಾ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಒಬ್ಬರಾದ ಪವನ್ ಗುಪ್ತಾ ಸಲ್ಲಿಸಿದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸುತ್ತಿದ್ದಂತೆ ದೆಹಲಿ ಸರ್ಕಾರ ಹಾಗೂ ತಿಹಾರ್ ಜೈಲು ಆಡಳಿತ ಅಪರಾಧಿಗಳಿಗೆ ಹೊಸ ಡೆತ್ ವಾರೆಂಟ್ ಜಾರಿ ಮಾಡುವಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ಗೆ ಮನವಿಯನ್ನು ಸಲ್ಲಿಸಿದ್ದು, ನಾಳೆ ಮಧ್ಯಾಹ್ನ 2 ಗಂಟೆಗೆ ಕೋರ್ಟ್ ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.










